ಮಂಜುನಾಥ ಶೆಟ್ಟಿ…

2026 ರ ಶಿಕ್ಷಕರ ದಿನಾಚರಣೆ ಅಂಗವಾಗಿ 2026-27ನೇ ಸಾಲಿನ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಅರ್ಹ ಶಿಕ್ಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಹ ಹಾಗೂ ಆಸಕ್ತ ಶಿಕ್ಷಕರು ತಮ್ಮ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 10-08-2026 ರೊಳಗೆ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *