ಮಂಜುನಾಥ ಶೆಟ್ಟಿ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಶಿವಮೊಗ್ಗ ನಗರಾಧ್ಯಕ್ಷರಾಗಿ ಪಂಡಿತ್ ಕಿಶೋರ್ ಕುಮಾರ್ ಅವರು ನೂತನವಾಗಿ ಆಯ್ಕೆಯಾಗಿದ್ದಾರೆ.


ನಗರದ ಶಿವಮೊಗ್ಗ ಕಂಟ್ರಿ ಕ್ಲಬ್ ನಲ್ಲಿ ಜಿಲ್ಲಾಧ್ಯಕ್ಷ ಕನ್ನಡ ಮುರಳಿ ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ನಗರಧ್ಯಕ್ಷರಾಗಿ ಪಂಡಿತ್ ಶಿವಕುಮಾರ್ ರವರು ಅಧಿಕಾರ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ರವರ ಆಶಯದಂತೆ ಕನ್ನಡ ಸಂಘಟನೆಗಳ ನೆಲ ಜಲ ನಾಡಿಗಾಗಿ ದುಡಿಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲೆಯ ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *