ಮಂಜುನಾಥ ಶೆಟ್ಟಿ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪನಹಳ್ಳಿ ಗ್ರಾಮದಲ್ಲಿ ಬಹುಕಾಲದಿಂದ ಎದುರಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಕೊಳವೆಬಾವಿ ಕೊರೆಸುವ ಮೂಲಕ ಪರಿಹಾರ ಕಲ್ಪಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರನ್ನು ಅಭಿನಂದಿಸಿದರು.

ಹರಪನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಕುರಿತು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಗ್ರಾಮಕ್ಕೆ ಅಗತ್ಯವಿರುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಂಡಿದ್ದರು.

ಕೊಳವೆಬಾವಿ ಕೊರೆಸುವ ಮೂಲಕ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಗ್ರಾಮಸ್ಥರು, ತಮ್ಮ ಮನವಿಗೆ ತ್ವರಿತವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಂಡ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *