ಮಂಜುನಾಥ ಶೆಟ್ಟಿ…
ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿರುವ ರಾಷ್ಟ್ರಪುರುಷರ ಪ್ರತಿಮೆಗಳ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ನಗರ ಪಾಲಿಕೆ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ, ಗಾಂಧಿ ಪಾರ್ಕ್ ಮುಂಭಾಗದಲ್ಲಿರುವ ಬಸವಣ್ಣನವರ ಪ್ರತಿಮೆ, ಗಾಂಧಿ ಪಾರ್ಕ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ, ಶಿವಪ್ಪ ನಾಯಕ ಅವರ ಪ್ರತಿಮೆ ಹಾಗೂ ವೀರಭದ್ರ ಚಿತ್ರಮಂದಿರದ ಸಮೀಪದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗಳನ್ನು ಸ್ವಚ್ಛವಾಗಿ ತೊಳೆದು, ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮವನ್ನು 6 ತಂಡಗಳಾಗಿ ವಿಭಜಿಸಿ, ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಬಿಜೆಪಿ ನಗರ ಪದಾಧಿಕಾರಿಗಳು ಹಾಗೂ ಶಿವಮೊಗ್ಗ ನಗರದ ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಸಹಕಾರ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ಮಾಜಿ ಸೊಡಾ ಅಧ್ಯಕ್ಷರಾದ ಜ್ಞಾನೇಶ್ವರ್, ನಗರ ಪ್ರಧಾನ ಕಾರ್ಯದರ್ಶಿ ನವುಲೆ ಮಂಜುನಾಥ್, ದೀನದಯಾಳು, ಮಾಜಿ ಪಾಲಿಕೆ ಸದಸ್ಯರಾದ ಪ್ರಭಾಕರ್, ಸುರೇಖಾ ಮುರಳೀಧರ್, ವಿಶ್ವನಾಥ್, ಗಾಡಿಕೊಪ್ಪ ಕುಮಾರ್, ಪುರುಷೋತ್ತಮ್, ಬಾಲಚಂದ್ರ, ಸೋಮೇಶ್ ಶೇಟ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.