ಮಂಜುನಾಥ ಶೆಟ್ಟಿ…

ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಆವರಣದಲ್ಲಿ, ಪೊಲೀಸ್ ಠಾಣೆಗೆ ಆಗಮಿಸುವ ಸಾರ್ವಜನಿಕರು ಕುಳಿತುಕೊಳ್ಳಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಸಮಾಧಾನ ಕಟ್ಟೆ ಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ ಐಪಿಎಸ್ ಅವರು ಉದ್ಘಾಟಿಸಿದರು.

ಈ ಸಮಯದಲ್ಲಿ ಮಾತನಾಡಿದ ಅವರು ಸಾರ್ವಜನಿಕರು ಪೊಲೀಸ್ ಠಾಣೆಗೆ ಆಗಮಿಸಿದ ಸಂದರ್ಭದಲ್ಲಿ ಉತ್ತಮ ಹಾಗೂ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸಮಾಧಾನ ಕಟ್ಟೆಯನ್ನು ನಿರ್ಮಿಸಲಾಗಿದೆ ಎಂದರು.

ಸಂದರ್ಭದಲ್ಲಿ ಶ್ರೀ ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ; ಶ್ರೀ ಸಂಜೀವ್ ಕುಮಾರ್ , ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ‘ಬಿ’ ಉಪವಿಭಾಗ; ಶ್ರೀ ದೇವರಾಜ್ ಟಿ.ವಿ., ಪೊಲೀಸ್ ಇನ್ಸ್ಪೆಕ್ಟರ್, ಶಿವಮೊಗ್ಗ ಸಂಚಾರ ವೃತ್ತ; ಪೊಲೀಸ್ ಉಪನಿರೀಕ್ಷಕರು, ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಠಾಣೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *