ಮಂಜುನಾಥ ಶೆಟ್ಟಿ…
ಶಿವಮೊಗ್ಗ ಬಿಜೆಪಿ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯುತ್ತಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ ಅಹೋರಾತಿ ಧರಣಿ ನಡೆಸುತ್ತಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೈಯಲ್ಲಿ ವಿವಿಧ ಪೋಸ್ಟರ್‌ಗಳನ್ನು ಹಿಡಿದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ತಕ್ಷಣ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ನಿಗಮದ ಹಗರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂದರ್ಭದಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ನೈತಿಕವಾಗಿ ಸರಿಯಲ್ಲ ಎಂದು ಬಿಜೆಪಿ ನಾಯಕರು ಆಕ್ಷೇಪಿಸಿದರು.