ಮಂಜುನಾಥ ಶೆಟ್ಟಿ…
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡ ಮತ್ತು ಬಿಲ್ಲವ ಅಸೋಸಿಯೇಷನ್ ಬೆಂಗಳೂರು (ಬಿಲ್ಲವ ಸಂಘ)ದ ಅಧ್ಯಕ್ಷರಾದ ಶ್ರೀ ಎಂ. ವೇದಕುಮಾರ್ ನೇತೃತ್ವದ ನಿಯೋಗವು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಸಚಿವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ, ಸಚಿವರನ್ನು ಸನ್ಮಾನಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಆರ್ಯ-ಈಡಿಗ ಹಾಗೂ ಬಿಲ್ಲವ ಸಮುದಾಯದ ಸಮಸ್ಯೆ, ಸಂಘಟನೆ, ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಸಮಾಜದ ಹಿರಿಯರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಸಮುದಾಯದ ಏಳಿಗೆ, ಹಿತಾಸಕ್ತಿ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಹಾಗೂ ನಾನು ಸದಾ ಶ್ರಮಿಸಲಿದ್ದೇನೆ ಎಂದು ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.
ನಿಯೋಗದಲ್ಲಿ ಸಮಾಜದ ಮುಖಂಡರಾದ ಶ್ರೀ ಪ್ರಕಾಶ್, ಶ್ರೀ ದುಷ್ಯಂತ್, ಶ್ರೀ ಶಿವಕುಮಾರ್ ಇದ್ದರು.