ಮಂಜುನಾಥ ಶೆಟ್ಟಿ…

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.


ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *