ಮಂಜುನಾಥ್ ಶೆಟ್ಟಿ…

ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಬೋರ್ಡ್‌ಗಳನ್ನು ತೆರವುಗೊಳಿಸುವ ಉದ್ದೇಶದಿಂದ ಕತ್ತರಿಸಿ ತೆರುವುಗೊಳಿಸಿದರು.

ಅದೇ ರೀತಿ, ಸಿಂಗಾರ್ ಶೋರೂಮ್ ಎದುರು ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದ್ದು, ಮತ್ತೊಂದು ಬದಿಯಲ್ಲಿ ‘ನೋ ಪಾರ್ಕಿಂಗ್’ ನಿಯಮ ಜಾರಿಯಲ್ಲಿದೆ. ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು.

ಆದ್ದರಿಂದ ಸಾರ್ವಜನಿಕರು ಪಾರ್ಕಿಂಗ್‌ಗೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ತಮ್ಮ ವಾಹನಗಳನ್ನು ನಿಲ್ಲಿಸಿ, ನೋ ಪಾರ್ಕಿಂಗ್ ನಿಯಮವನ್ನು ಪಾಲಿಸುವ ಮೂಲಕ ಸುಗಮ ಸಂಚಾರಕ್ಕೆ ಹಾಗೂ ಸಂಚಾರಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಹಕರಿಸುವಂತೆ ಕೋರಿದರು.

Leave a Reply

Your email address will not be published. Required fields are marked *