ಮಂಜುನಾಥ್ ಶೆಟ್ಟಿ…

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸುತಿದ್ದು, ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.


ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9380663606/ 9108235132 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *