ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ತೀರ್ಥಹಳ್ಳಿ ರಸ್ತೆಯಲ್ಲಿ ಪಿಎಸ್‌ಐ ಶ್ರೀಮತಿ ಸ್ವಪ್ನಾ ರವರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, KA-18-Z-6*** ನೋಂದಣಿ ಸಂಖ್ಯೆಯ ಮಹೀಂದ್ರಾ ಬೊಲೆರೊ ವಾಹನವನ್ನು ತಡೆದು ಪರಿಶೀಲಿಸಲಾಯಿತು.
ಅ ಸಮಯದಲ್ಲಿ ವಾಹನವನ್ನು ಚಾಲನೆ ಮಾಡುತ್ತಿದ್ದವರು 16 ವರ್ಷದ ಅಪ್ರಾಪ್ತ ಬಾಲಕ ಮಾಸ್ಟರ್ *****, ಗಾಜನೂರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಆತನ ತಂದೆ ಶ್ರೀ ಕರಿಬಸಯ್ಯ ಬಿನ್ ಷಣ್ಮುಖಯ್ಯ, ಗಾಜನೂರು ರವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗಿತ್ತು.
ಈ ಪ್ರಕರಣದಲ್ಲಿ 27-08-2026 ರಂದು ನ್ಯಾಯಾಲಯವು ವಾಹನದ ಮಾಲೀಕರಿಗೆ ₹26,500/- ದಂಡ ವಿಧಿಸಿದೆ.