ಮಂಜುನಾಥ್ ಶೆಟ್ಟಿ…

18 ವರ್ಷ ಮೇಲ್ಪಟ್ಟ ಹಾಗೂ ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ಅರ್ಹ ನಾಗರಿಕರು ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ರಾಜ್ಯಮಟ್ಟದ ಸ್ವೀಪ್ ತರಬೇತುದಾರರಾದ ನವೀದ್ ಅಹಮದ್ ಪರ್ವೀಜ್ ತಿಳಿಸಿದರು.


ನಗರದ ನೆಹರು ಸ್ಟೇಡಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) – 2026’ ಹಾಗೂ ಹೊಸ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರ್ಹತೆ: 01.10.2026ಕ್ಕೆ 18 ವರ್ಷ ಪೂರೈಸುವ ಮತ್ತು ಮೇಲ್ಪಟ್ಟ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.


ವಿಶೇಷ ಅಭಿಯಾನದ ದಿನಾಂಕಗಳು: ಆಗಸ್ಟ್ 29, 30 ಹಾಗೂ ಸೆಪ್ಟೆಂಬರ್ 19 ಮತ್ತು 20 ರಂದು ಹೊಸ ಮತದಾರರ ನೋಂದಣಿ ವಿಶೇಷ ಅಭಿಯಾನ ನಡೆಯಲಿದೆ.
ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
ಅಂತಿಮ ಪಟ್ಟಿ ಪ್ರಕಟಣೆ: ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ.


ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳು…


ಹೆಸರು ನೋಂದಾಯಿಸಿಕೊಳ್ಳಲು ಬಯಸುವವರು ತಮ್ಮ ಮತಗಟ್ಟೆಯ ಬಿಎಲ್‌ಒ ಮೂಲಕ ಅಥವಾ ಆನ್‌ಲೈನ್‌ನಲ್ಲಿ ನಮೂನೆ-6 ಭರ್ತಿ ಮಾಡಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು:
ವಯಸ್ಸು/ಜನ್ಮ ದಿನಾಂಕದ ಪ್ರಮಾಣಪತ್ರ
ವಿಳಾಸದ ಪುರಾವೆ
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
ಡಿಕ್ಲರೇಷನ್ ಫಾರ್ಮ್‌ನಲ್ಲಿ ತಂದೆ, ತಾಯಿ ಅಥವಾ ಅಜ್ಜ-ಅಜ್ಜಿಯರ 2002 ರ ಎಸ್.ಸಿ.ಆರ್ ಮಾಹಿತಿ ಹಾಗೂ ಮೊಬೈಲ್ ಸಂಖ್ಯೆ.
ಆನ್‌ಲೈನ್ ನೋಂದಣಿ ಮತ್ತು ಸಹಾಯವಾಣಿ:
ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಲು ECINET App ಅಥವಾ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗಳಾದ ceo.karnataka.gov.in ಮತ್ತು voters.eci.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮತದಾರರ ಉಚಿತ ಸಹಾಯವಾಣಿ ಸಂಖ್ಯೆ 1950 ಅನ್ನು ಸಂಪರ್ಕಿಸಬಹುದು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯಕ್, ಜಿಲ್ಲಾ ತರಬೇತಿ ಕೇಂದ್ರದ ಮುಖ್ಯಸ್ಥರಾದ ಗಣೇಶ್, ಜಿಲ್ಲಾ ಮಟ್ಟದ ತರಬೇತುದಾರರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *