ಮಂಜುನಾಥ್ ಶೆಟ್ಟಿ…

ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.
ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ ನೀರನ್ನು ಇಂಪೌಂಡ್ ರಿಸರ್ವಿಯರ್ ಗಳಿಗೆ ಹರಿಸಲಾಗುವುದು ಎಂದು ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕುಡಿಯುವ ನೀರಿಗೆ ಮಾತ್ರ…

ನಾಲೆಯಲ್ಲಿ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಅಚ್ಚುಕಟ್ಟು ಪ್ರದೇಶದ ಬೆಳೆಗಳಿಗೆ ಇದನ್ನು ಉಪಯೋಗಿಸಬಾರದು.
ಅಕ್ರಮ ನೀರೆತ್ತುವುದು ನಿಷೇಧ…

ರೈತರು ನಾಲೆಯಿಂದ ಅಕ್ರಮವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸಾರ್ವಜನಿಕರಿಗೆ ಎಚ್ಚರಿಕೆ: ನೀರು ಹರಿಯುವ ಅವಧಿಯಲ್ಲಿ ಸಾರ್ವಜನಿಕರು ಕಾಲುವೆಯಲ್ಲಿ ತಿರುಗಾಡುವುದಾಗಲಿ ಅಥವಾ ದನ-ಕರುಗಳನ್ನು ಕಾಲುವೆಗೆ ಇಳಿಸುವುದಾಗಲಿ ಮಾಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಕುಡಿಯುವ ನೀರಿನ ಅಭಾವ ತಪ್ಪಿಸಲು ಕೈಗೊಳ್ಳಲಾಗಿರುವ ಈ ಕ್ರಮಕ್ಕೆ ಸಾರ್ವಜನಿಕರು ಹಾಗೂ ರೈತಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ವಿನಂತಿಸಿದೆ. 

Leave a Reply

Your email address will not be published. Required fields are marked *