ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ವಿದ್ಯಾಸೇತು ಪುಸ್ತಕ ಸಹಕಾರಿ ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಅಭಿಪ್ರಾಯಪಟ್ಟರು. ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ತ್ಯಾಜವಳ್ಳಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕ ಹಾಗೂ ಮಾಸ್ಕ್ ವಿತರಿಸಿ ಮಾತನಾಡಿ, ಕರೊನಾದಿಂದ ವಿದ್ಯಾಭ್ಯಾಸಕ್ಕೆ ಹಿನ್ನಡೆ ಆಗಿತ್ತು. ಇದೀಗ ವಿದ್ಯಾರ್ಥಿಗಳ ಕಲಿಕಾ ದೃಷ್ಠಿಯಿಂದ ರೋಟರಿ ಸಂಸ್ಥೆಯು ವಿದ್ಯಾಸೇತು ಪುಸ್ತಕ ಸಿದ್ಧಪಡಿಸಿದೆ ಎಂದು ತಿಳಿಸಿದರು. ಎಸ್‌ಎಸ್‌ಎಲ್‌ಸಿ ಸಮಗ್ರ ಮಾಹಿತಿ ಇರುವ ಹಾಗೂ ಸರಳವಾಗಿ ವಿದ್ಯಾರ್ಥಿಗಳಿಗೆ ಅರ್ಥ ಆಗುವಂತೆ ಹಾಗೂ ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾಸೇತು ಪುಸ್ತಕ ಅಧ್ಯಯನದಿಂದ ಕಲಿಕಾ ಸಾಮಾರ್ಥ್ಯ ವೃದ್ಧಿ ಆಗುತ್ತದೆ ಎಂದರು.
ಎಸ್‌ಎಸ್‌ಎಲ್‌ಸಿ ಮಕ್ಕಳ ಕಲಿಕೆಗೆ ಉಪಯುಕ್ತವಾಗುವಂತೆ ಪರಿಣಿತ ಶಿಕ್ಷಕರು ಸಿದ್ದಪಡಿಸಿರುವ ವಿದ್ಯಾಸೇತು ಮಾರ್ಗದರ್ಶಿ ಕೈಪಿಡಿಯನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸುವ ಅಭಿಯಾನ ನಡೆಸಲಾಗುತ್ತಿದೆ. ಇಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕರೋನಾ ಸೋಂಕು ವ್ಯಾಪಿಸಿದ ಪರಿಣಾಮ ಮಕ್ಕಳಿಗೆ ಎರಡು ವರ್ಷಗಳ ಕಾಲ ಸೂಕ್ತ ರೀತಿಯಲ್ಲಿ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಯುತ ಶಿಕ್ಷಣ ಕಲಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕಿದೆ ಎಂದರು.
ಎಸ್‌ಡಿಎಸಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡಲು ಪ್ರೇರೆಪಿಸುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ವಿದ್ಯಾಸೇತು ಸೇರಿದಂತೆ ನಿರಂತರವಾಗಿ ಶೈಕ್ಷಣಿಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿರುವುದು ಅಭಿನಂದನೀಯ ಎಂದು ಹೇಳಿದರು.
ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಆಗುವಂತೆ ಪೂರಕ ಕಾರ್ಯಗಳನ್ನು ರೋಟರಿ ಸಂಸ್ಥೆಯು ನಡೆಸುತ್ತಿರುವುದು ಶ್ಲಾಘನೀಯ. ಕರೊನಾ ಅವಧಿಯಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ರೋಟರಿ ಸಂಸ್ಥೆಯು ಶಿಕ್ಷಣ ಕ್ಷೇತ್ರಕ್ಕೆ ಸಹಕಾರಿ ಆಗುವಂತೆ ಅಗತ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರಿ ಶಾಲೆ ಮಕ್ಕಳ ಉತ್ತಮ ಭವಿಷ್ಯಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಹೇಳಿದರು.
ಸಮಾರಂಭದಲ್ಲಿ ಎಚ್.ಎಂ.ಬಸವರಾಜಪ್ಪ, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್, ವೀಣಾ ಹರ್ಷ, ರಾಜೇಶ್ವರಿ ಪ್ರತಾಪ್, ಮಮತಾ ಸುಧೀಂದ್ರ, ಸುನಂದಾ ಜಗದೀಶ್, ಡಾ. ಅಮೀನ್ ಮತ್ತಿತರರು ಇದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153