ಮಂಜುನಾಥ್ ಶೆಟ್ಟಿ…

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಅವರು ನೇಮಕವಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರಾದ ಯುಟಿ ಖಾದರ್ ಖಾದರ್ ರವರು ಸಂತೋಷ್ ಶೆಟ್ಟಿ ಅವರನ್ನು ನೇಮಕ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಂಗಳೂರು ಉಡುಪಿ ಭಾಗದ ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಸಂತೋಷ್ ಶೆಟ್ಟಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ನಿಗಮದ ಅಧ್ಯಕ್ಷರಾದ ಶ್ರೀ ಕೆ. ಹರೀಶ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.