ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ದಿನದಯಾಳು ರಸ್ತೆಯಲ್ಲಿ ಸಾರ್ವಜನಿಕ ವಾಹನ ಸವಾರರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮರವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ, ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಮನಗಂಡು ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ 20 ಗಿಡಗಳನ್ನು ನೆಡಲಾಯಿತು.
ಈ ಕಾರ್ಯಕ್ರಮವನ್ನು ಶ್ರೀ ಸಂಜೀವ್ ಕುಮಾರ್, ಮಾನ್ಯ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ‘ಬಿ’ ಉಪವಿಭಾಗ ಮತ್ತು ಶ್ರೀ ಡಾ ಅಜ್ಜಯ್ಯ .ಜಿ.ಆರ್ ಶಿವಮೊಗ್ಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್‌ಒ) ರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ದೇವರಾಜ್, ಪೊಲೀಸ್ ಇನ್ಸ್‌ಪೆಕ್ಟರ್, ಶಿವಮೊಗ್ಗ ಸಂಚಾರ ವೃತ್ತ, ಶ್ರೀ ವಿಜಯಕುಮಾರ್.ಜೆ ,ವಲಯ ಅರಣ್ಯಾಧಿಕಾರಿ . ಶ್ರೀ ಪ್ರಮೋದ ಕೆ ಉಪ ವಲಯ ಅರಣ್ಯಾಧಿಕಾರಿ ಶ್ರೀ ಪರಿಸರ ರಮೇಶ್ ,ಶ್ರೀಮತಿ ಸ್ವಪ್ನಾ, ಪಿಎಸ್‌ಐ, ಪಶ್ಚಿಮ ಸಂಚಾರ ಪೊಲೀಸ್ ಠಾಣೆ, ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು, ಅರಣ್ಯ ಇಲಾಖೆಯ ಸಿಬ್ಬಂದಿಯವರು ಹಾಗೂ ಜೆಎನ್‌ಎನ್‌ಸಿ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.