ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ವತಿಯಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಿದ್ದ “ಪ್ರತಿಭಾ ಪುರಸ್ಕಾರ ಹಾಗೂ ಕಲಾ ಸ್ಪಂದನ” ಕಾರ್ಯಕ್ರಮವು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಗೌರಿ ಗದ್ದೆಯ ಅವಧೂತ ಶ್ರೀ ವಿನಯ್ ಗುರುಜಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಶಾಸಕರುಗಳಾದ ಶ್ರೀ ಡಿ.ಎಸ್ . ಅರುಣ್ ಹಾಗೂ ಡಾ. ಧನಂಜಯ ಸರ್ಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು “ಪ್ರತಿಭಾ ಪುರಸ್ಕಾರ” ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರ ಮುಂದಿನ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು. ನಂತರ ನಡೆದ “ಕಲಾ ಸ್ಪಂದನ” ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಕಲಾ ಪ್ರದರ್ಶನಗಳು ಪ್ರೇಕ್ಷಕರ ಮನಸೂರೆಗೊಂಡವು.

ಸಂಘದ ಅಧ್ಯಕ್ಷರಾದ ಡಾ. ಎಸ್.ವಿ. ಭರತ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಈಶ್ವರ್ ಹಾಗೂ ನಿರ್ದೇಶಕರಾದ ದತ್ತಾಕುಮಾರ್, ಸುರೇಶ್, ನಾಗೇಶ್, ಮಹೇಶ್, ಅರವಿಂದ್, ಗೌರಿ ಸುರೇಶ್,ರಾಘವೇಂದ್ರ,ನಟರಾಜ್ ಕೆ.ಜಿ., ಗೌರಿ ಶ್ರೀನಾಥ್ ಮತ್ತು ಎಸ್.ಎನ್. ಶ್ರೀನಾಗ್ ಉಪಸ್ಥಿತರಿದ್ದರು.

ಅಲ್ಲದೆ, ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಸಚಿನ್, ಸಿಬ್ಬಂದಿ ವರ್ಗ, ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.

Leave a Reply

Your email address will not be published. Required fields are marked *