ಮಂಜುನಾಥ್ ಶೆಟ್ಟಿ…
ಬೆಂಗಳೂರು: ರಾಜ್ಯ ಅಪೆಕ್ಸ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯರಾದ ಎಂಎಲ್‌ಸಿ ರವಿ ಹಾಗೂ ಉಪಾಧ್ಯಕ್ಷರಾಗಿ ಶರಣಗೌಡ ಬಯ್ಯಾಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದ ಸಹಕಾರ ಸಚಿವರಾದ ಲಕ್ಷ್ಮಣ ಸವದಿ ಅವರು ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ಅವರ ಸಮ್ಮುಖದಲ್ಲಿ ಇಂದು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರು ಹಾಗೂ ಮಾಜಿ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ್ ಗೌಡ ಅವರ ಸಮನ್ವಯ, ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಮುಖ್ಯಮಂತ್ರಿಗಳು ವಹಿಸಿದ್ದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ ಡಾ. ಆರ್. ಎಂ. ಮಂಜುನಾಥ್ ಗೌಡ ಅವರು ಸಹಕಾರ ಕ್ಷೇತ್ರದಲ್ಲಿ ಒಗ್ಗಟ್ಟು ಹಾಗೂ ಸಮನ್ವಯಕ್ಕೆ ಆದ್ಯತೆ ನೀಡುವ ಮೂಲಕ ಈ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಂಘಟನಾ ಸಾಮರ್ಥ್ಯ ಹಾಗೂ ಸಹಕಾರ ಕ್ಷೇತ್ರದಲ್ಲಿನ ಅನುಭವಕ್ಕೆ ಈ ಬೆಳವಣಿಗೆ ಮತ್ತೊಂದು ಹೆಗ್ಗುರುತಾಗಿದೆ.
ಎಂಎಲ್‌ಸಿ ರವಿ ಹಾಗೂ ಶರಣಗೌಡ ಬಯ್ಯಾಪುರ ಅವರ ಅವಿರೋಧ ಆಯ್ಕೆ ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗಿ, ರೈತರು, ಸಹಕಾರ ಸಂಘಗಳು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.