ಮಂಜುನಾಥ್ ಶೆಟ್ಟಿ…

ಭದ್ರಾವತಿ ತಾಲೂಕಿನ ಗುರುಭವನ ಕಟ್ಟಡದ ಮೊದಲ ಹಂತದ ಕಾಮಗಾರಿಗೆ ಸರ್ಕಾರದಿಂದ ಸುಮಾರು ₹2 ಕೋಟಿ ಅನುದಾನ ಮಂಜೂರು ಮಾಡಿಸುವಲ್ಲಿ ವಿಶೇಷ ಗಮನಹರಿಸಿ ಸಹಕಾರ ನೀಡಿದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿಯವರನ್ನು ತಾಲೂಕಿನ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ KRIDL ನಿಗಮದ ಅಧ್ಯಕ್ಷರಾದ ಶ್ರೀ ಬಿ. ಕೆ. ಸಂಗಮೇಶ್ವರ ಅವರು ಗುರುಭವನದ ಮೊದಲ ಹಂತದ ಕಟ್ಟಡ ಕಾಮಗಾರಿಯ ಮಳಿಗೆಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಶಿಕ್ಷಕ–ಉಪನ್ಯಾಸಕ ಬಂಧುಗಳು ಉಪಸ್ಥಿತರಿದ್ದರು.