ಮಂಜುನಾಥ್ ಶೆಟ್ಟಿ…

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ವತಿಯಿಂದ 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ
ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆಗಳಡಿಯಲ್ಲಿ ಆರ್ಯವೈಶ್ಯ ಸಮುದಾಯದ ಆಸಕ್ತರು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.


ಸಾಮಾನ್ಯ ವರ್ಗದಲ್ಲಿನ ಆರ್ಯವೈಶ್ಯ ಸಮುದಾಯಕ್ಕೆ ಸೇರಿದವರಾಗಿದ್ದು, ನಮೂನೆ-ಜಿ ಯಲ್ಲಿ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿ ಇರುವಂತೆ ಹೊಂದಾಣಿಕೆಯಾಗಬೇಕು.


ಆಸಕ್ತ ಆರ್ಯವೈಶ್ಯ ಸಮುದಾಯದ ಅರ್ಜಿದಾರರು ವೆಬ್ ಪೋರ್ಟಲ್ https://kacdc.karnataka.gov.in ಮೂಲಕ ಅ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.: 9448451111/ 9611612302 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ. ಕಛೇರಿ ದೂ.ಸಂ. 08182-229634ನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *