ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಪೊಲೀಸ್ ಸಿಬ್ಬಂದಿ ಹೊತ್ತುಕೊಂಡು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಇದೀಗ ಚರ್ಚೆಗೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಠಾಣೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಬಳಿಕ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಪೂರ್ವ ಸಂಚಾರಿ ಪೊಲೀಸ್ ಠಾಣೆಯಿಂದ ಆರಂಭವಾದ ವಿಸರ್ಜನಾ ಮೆರವಣಿಗೆ ತುಂಗಾ ನದಿಯ ಭೀಮನ ಮಡು ಕಡೆಗೆ ಸಾಗುತ್ತಿತ್ತು. ಮೆರವಣಿಗೆ ವೇಳೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ನೃತ್ಯ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕೋಟೆ ಭೀಮೇಶ್ವರ ದೇವಸ್ಥಾನದ ಬಳಿ ಶಾಸಕ ಎಸ್.ಎನ್.ಚನ್ನಬಸಪ್ಪ ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *