ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕುಲಸಚಿವರಿಗೆ ಮನವಿ ಸಲ್ಲಿಸಿದರು.

ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಯೊಂದು ಸೆಮಿಸ್ಟರ್‌ನಲ್ಲಿಯೂ ಪರೀಕ್ಷೆ ಹಾಗೂ ಫಲಿತಾಂಶಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಮುಂದಿನ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ವಿಶೇಷವಾಗಿ ಪರೀಕ್ಷೆಗೆ ಹಾಜರಾಗಿದ್ದರೂ ಫಲಿತಾಂಶದಲ್ಲಿ “Absent” ಎಂದು ತೋರಿಸುವುದು, ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬ, ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ, ಡಿಜಿಟಲ್ ಮೌಲ್ಯಮಾಪನದಲ್ಲಿನ ದೋಷಗಳು, UUCMS ಪೋರ್ಟಲ್‌ನ ತಾಂತ್ರಿಕ ಸಮಸ್ಯೆಗಳು, ಮರುಮೌಲ್ಯಮಾಪನ ಹಾಗೂ ಮರುಎಣಿಕೆ ಫಲಿತಾಂಶಗಳಲ್ಲಿ ವಿಳಂಬ, ಅಂಕಪಟ್ಟಿ ಪಡೆಯುವಲ್ಲಿ ವಿಳಂಬ ಹಾಗೂ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ.

ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಳಗಿನ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು:

  1. ಪರೀಕ್ಷಾ ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸಬೇಕು.
  2. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ “Absent” ಎಂದು ತೋರಿಸುವ ದೋಷವನ್ನು ತಕ್ಷಣ ಸರಿಪಡಿಸಬೇಕು.
  3. ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ ಹಾಗೂ ಇತರೆ ದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು.
  4. ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಲ್ಲಿನ ದೋಷಗಳನ್ನು ನಿವಾರಿಸಬೇಕು.
  5. UUCMS ಪೋರ್ಟಲ್‌ನ ಪರೀಕ್ಷಾ ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
  6. ಮರುಮೌಲ್ಯಮಾಪನ ಮತ್ತು ಮರುಎಣಿಕೆ ಫಲಿತಾಂಶಗಳನ್ನು ವಿಳಂಬವಿಲ್ಲದೆ ಪ್ರಕಟಿಸಬೇಕು.
  7. ಅಂಕಪಟ್ಟಿ ಹಾಗೂ ಪರೀಕ್ಷಾ ಸಂಬಂಧಿತ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು.
  8. ಪರೀಕ್ಷಾ ಶುಲ್ಕದ ಕುರಿತು ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು.
  9. ಪರೀಕ್ಷಾ ವೇಳಾಪಟ್ಟಿ ಹಾಗೂ ಇತರೆ ಪರೀಕ್ಷಾ ಮಾಹಿತಿಯನ್ನು ಮುಂಚಿತವಾಗಿ ಪ್ರಕಟಿಸಬೇಕು.
  10. ಪರೀಕ್ಷಾ ಫಲಿತಾಂಶ ಪ್ರಕಟಿಸುವ ಮೊದಲು ಫಲಿತಾಂಶಗಳ ಸಂಪೂರ್ಣ ಪರಿಶೀಲನೆ ನಡೆಸಬೇಕು.
  11. ಪರೀಕ್ಷಾ ಫಲಿತಾಂಶದ ತಪ್ಪುಗಳಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ತ್ವರಿತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕು.
  12. ಪರೀಕ್ಷೆ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳ ದೂರುಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ನೀಡಬೇಕು.

ವಿದ್ಯಾರ್ಥಿಗಳ ಭವಿಷ್ಯಕ್ಕೆ ನೇರವಾಗಿ ಸಂಬಂಧಿಸಿರುವುದರಿಂದ, ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಮತ್ತು ಫಲಿತಾಂಶ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ಸಮಯಪಾಲನೆಯನ್ನು ಖಚಿತಪಡಿಸುವಂತೆ ಜಿಲ್ಲಾ NSUI ಶಿವಮೊಗ್ಗ ವತಿಯಿಂದ ಆಗ್ರಹಿಸುತ್ತೇವೆ.

ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ಪ್ರತಿಯೊಂದು ಸೆಮಿಸ್ಟರ್‌ನಲ್ಲೂ ಮರುಕಳಿಸುತ್ತಿರುವ ಪರೀಕ್ಷೆ ಮತ್ತು ಫಲಿತಾಂಶದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.

ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ, ಮುಂದಿನ ದಿನಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಬಂದ್‌ಗೆ ಕರೆ ನೀಡಿ ವಿದ್ಯಾರ್ಥಿಗಳೊಂದಿಗೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಎಚ್ಚರಿಸಿ ಕುವೆಂಪು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವರಾದ ತಿಮ್ಮರಾಯಪ್ಪ ಹಾಗೂ ಪರೀಕ್ಷಾಂಗ ಉಪಕುಲ ಸಚಿವರಾದ ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

NSUI ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯಕುಮಾರ್ , ಜಿಲ್ಲಾ ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರಾಧ್ಯಕ್ಷ ರವಿಕುಮಾರ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಚಂದ್ರು ಜಿ ರಾವ್ ,ಆದಿತ್ಯ, ಸುಭಾನ್ ,ಪರಾಜ್, ವರುಣ್, ಶ್ರೀಕಾಂತ ,ಸಾದುಲ್ಲಾ ,ಯೂಸಫ್ ,ಸೃಜನ್ ,ಪ್ರಜ್ವಲ್, ಆಕಾಶ್, ಇಂದ್ರಸೇನಾ, ಅಭಿ, ಕುಮಾರಸ್ವಾಮಿ ,ದೀಪಕ್, ಜೀವನ್ ,ಸುಮಂತ್, ಆದರ್ಶ್, ಸೃಜನ್ ಡಿಂಕು ,ರಿಯಾನ್, ಫೈಸ್, ಸುಲ್ತಾನ್, ಅರ್ಮಾನ್, ಜುಬೇರ್, ಇನ್ನೂ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *