ಮಂಜುನಾಥ್ ಶೆಟ್ಟಿ…
ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು.ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯನ್ನು ಸಮರ್ಪಕವಾಗಿ ನೀಡಬೇಕು, ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆಗಳ ನಿರಂತರ ವಿದ್ಯುತ್ ಒದಗಿಸಬೇಕು, ಏತ ನೀರಾವರಿ ಯೋಜನೆಗಳಿಗೆ ಅಗತ್ಯ ಪ್ರಮಾಣದ ವಿದ್ಯುತ್ ಪೂರೈಕೆ ಮಾಡಿ ತಾಲೂಕಿನ ಕೆರೆಗಳನ್ನು ತುಂಬಿಸಬೇಕು ಹಾಗೂ ಶಿಕಾರಿಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಪಾದಯಾತ್ರೆಯಲ್ಲಿ ತಾಲೂಕಿನ ರೈತರ ವಿವಿಧ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಲಾಯಿತು. ಸಂಜೆ 5 ಗಂಟೆಯವರೆಗೆ ತಾಲೂಕು ಕಚೇರಿಯಲ್ಲಿ ಪ್ರತಿಭಟನೆ ನಡಶಲು ನಿರ್ಧರಿಸಲಾಯಿತು.
ಶಿಕಾರಿಪುರ ತಾಲೂಕು ಬಿಜೆಪಿ ಕಚೇರಿಯಿಂದ ಆರಂಭವಾದ ಪಾದಯಾತ್ರೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿತು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿ, ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಂತೆ ಘೋಷಣೆಗಳನ್ನು ಕೂಗಿದರು.
ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಅತ್ಯಂತ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ರೈತರು ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.
ಅದೇ ರೀತಿ ತಾಲೂಕಿನ ವಿವಿಧ ಭಾಗಗಳಲ್ಲಿರುವ ಏತ ನೀರಾವರಿ ಯೋಜನೆಗಳಿಗೆ ಅಗತ್ಯ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು. ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಕೆರೆಗಳನ್ನು ತುಂಬಿಸುವ ಕ್ರಮ ಕೈಗೊಳ್ಳಬೇಕು. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಾಗೂ ರೈತರ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.