ಮಂಜುನಾಥ್ ಶೆಟ್ಟಿ…

ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಒಂದು ವೈದ್ಯಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಎಂಬಿಬಿಎಸ್ ವಿದ್ಯಾರ್ಹತೆ ಹಾಗೂ ಅನುಭವ ಹೊಂದಿರುವ, 70 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.72,000 ಗೌರವ ಧನ ನೀಡಲಾಗುತ್ತದೆ.


ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ವಿದ್ಯಾರ್ಹತೆ ಮತ್ತು ಅನುಭವ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 23-09-2026 ರ ಸಂಜೆ 4:00 ಗಂಟೆಯೊಳಗೆ ‘ಜಿಲ್ಲಾ ಸರ್ಜನ್ನರು, ಮೆಗ್ಗಾನ್ ಬೋಧನಾ ಆಸ್ಪತ್ರೆ, ಶಿವಮೊಗ್ಗ’ ಇವರ ಕೊಠಡಿಗೆ ನೇರವಾಗಿ ಸಲ್ಲಿಸಬೇಕೆಂದು ಜಿಲ್ಲಾ ಸರ್ಜನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *