ಮಂಜುನಾಥ್ ಶೆಟ್ಟಿ…

2026-27ನೇ ಸಾಲಿನ 14 ರಿಂದ17 ವರ್ಷ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಸೆ. 27 ಮತ್ತು ಅ.5 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಸರ್ಕಾರಿ, ಅನುದಾನ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಆಯಾ ದಿನಾಂಕಗಳಂದು ಆಯಾ ತಾಲೂಕುಗಳ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಯೊಳಗಾಗಿ ಇಲಾಖೆಯ ನಿಯಮಾನುಸಾರ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಬೇಕು.


ಸೆ. 27 ರಂದು ಭದ್ರಾವತಿಯ ಪೂರ್ಣ ಪ್ರಜ್ಞಾ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಸ್ ಮತ್ತು ಭದ್ರಾವತಿಯ ಜಟ್‌ಪಟ್ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಹಾಗೂ ಅ.05 ರಂದು ಭದ್ರಾವತಿಯ ವಿ.ಐ.ಎಸ್.ಎಲ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ದೈಹಿಕ ಶಿಕ್ಷಣ ಅಧಿಕಾರಿ ರಮೇಶ್ ಬಾಬು-9113547166 , ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರಪ್ಪ ಹೆಚ್. -9880839575 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *