ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ಶಾಲಾ ಕಟ್ಟಡಕ್ಕೆ ಎನ್ ಓಸಿ ನೀಡಲು 1 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ನೆಲೆಯಲ್ಲಿ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಶಿಕಾರಿಪುರದ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದಿಂದ ಎನ್‌ಒಸಿ ನೀಡಲು ಅಧಿಕಾರಿ ಅಶೋಕ್ ಕುಮಾರ್ ಅವರು ದೂರುದಾರ ಅನೂಪ್ ಅವರ ಬಳಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚ ನೀಡಲು ಇಚ್ಚಿಸಿ ಅನೂಪ್ ಅವರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ, ರುದ್ರೇಶ್ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.