ಮಂಜುನಾಥ್ ಶೆಟ್ಟಿ…
ದಿನಾಂಕ 18.04.2026 ರಂದು ದುಬಾರೆ ಆನೆ ಶಿಬಿರದಲ್ಲಿ ನಡೆದ ಆಕಸ್ಮಿಕ ದುರ್ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ, ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಅರಣ್ಯ ಸಚಿವರು ಸೂಚಿಸಿದ್ದರು. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ನಂತರವಷ್ಟೇ ಶಿಬಿರಗಳನ್ನು ಪುನರಾರಂಭಿಸಲು ನಿರ್ದೇಶಿಸಲಾಗಿತ್ತು.ಅರಣ್ಯ ಇಲಾಖೆ ನೀಡಿರುವ ಸುರಕ್ಷತಾ ಮಾರ್ಗಸೂಚಿಗಳಂತೆ ಈಗ ಸಕ್ರೆಬೈಲು ಆನೆ ಬಿಡಾರದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರತ್ಯೇಕ ಮಾರ್ಗಗಳ ವ್ಯವಸ್ಥೆ…
ಸಾರ್ವಜನಿಕರಿಗೆ ಮತ್ತು ಆನೆಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಗುರುತಿಸಲಾಗಿದೆ.
ಸಾರ್ವಜನಿಕರು ಮತ್ತು ಆನೆಗಳ ನಡುವೆ ನೇರ ಸಂಪರ್ಕ ಬಾರದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸಲಾಗಿದೆ.
ಸೂಚನಾ ಫಲಕಗಳು: ಪ್ರವಾಸಿಗರ ಮಾಹಿತಿ ಮತ್ತು ಜಾಗೃತಿಗಾಗಿ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.
ಈ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದ್ದು, ದಿನಾಂಕ 26.09.2026 ರಿಂದ ಸಕ್ರೆಬೈಲು ಆನೆ ಬಿಡಾರವನ್ನು ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ಪುನರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.