ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಅದ್ದೂರಿಯಾಗಿ ಆರಂಭಗೊಂಡಿದೆ.

ನಗರದ ಕೋಟೆ ಭೀಮೇಶ್ವರ ದೇವಸ್ಥಾನದಿಂದ 11 ಗಂಟೆಗೆ ಗಣಪತಿ ಮೂರ್ತಿಯನ್ನು ರಾಜಬೀದಿ ಉತ್ಸವದ ಮೂಲಕ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಂಗಳವಾದ್ಯಗಳ ಮೊಳಗುವಿಕೆಯೊಂದಿಗೆ ಆರಂಭವಾದ ಉತ್ಸವದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ರಾಜಭೀದಿ ಉತ್ಸವದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಕೋಟೆ ಭೀಮೇಶ್ವರ ಸ್ವಾಮಿ ದೇವಸ್ಥಾನದ ಬಳಿ ಗಣಪತಿ ಮೂರ್ತಿಗೆ ಹೂವಿನ ಹಾರ ಹಾಗೂ ಮೂಸುಂಬೆ ಹಾರವನ್ನು ಕ್ರೇನ್ ಮೂಲಕ ಹಾಕಿ ಗೌರವ ಸಲ್ಲಿಸಲಾಯಿತು. ಸಮಸ್ತ ಹಿಂದೂ ಬಾಂಧವರ ನಡುವೆ ರಾಜಬೀದಿ ಉತ್ಸವ ಅದ್ದೂರಿಯಾಗಿ ಸಾಗುತ್ತಿದೆ.

Leave a Reply

Your email address will not be published. Required fields are marked *