ಮಂಜುನಾಥ್ ಶೆಟ್ಟಿ…
ನಾಡಹಬ್ಬ ದಸರಾ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1ರಂದು ಮಹಿಳೆಯರಿಗಾಗಿ ವಿವಿಧ ಆಟೋಟ ಹಾಗೂ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದಲ್ಲಿ ಎರಡೂ ದಿನ ಬೆಳಗ್ಗೆ 10 ಗಂಟೆಯಿಂದ ಸ್ಪರ್ಧೆಗಳು ನಡೆಯಲಿವೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಹಿಳಾ ದಸರಾ ಸಮಿತಿ ಮನವಿ ಮಾಡಿದೆ.
ಸೆಪ್ಟೆಂಬರ್ 30ರಂದು ಸಾಕ್ಷಾತ್ ದೇವಿ ಹಾಗೂ ಅಲಂಕಾರ ಸ್ಪರ್ಧೆ, ವಿವಿಧ ವೈಯಕ್ತಿಕ ಆಟೋಟ ಸ್ಪರ್ಧೆಗಳು, ಅಂತ್ಯಾಕ್ಷರಿ ಮತ್ತು ಮೆಹಂದಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಅಕ್ಟೋಬರ್ ಕರ್ನಾಟಕದ ಸಾಂಪ್ರದಾಯಿಕ ಉಡುಗೆ-ತೊಡುಗೆ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ‘ಮಹಾ ನಟಿಯರು’ ಎಂಬ ವಿಶೇಷ ಸ್ಪರ್ಧೆಯೂ ಮಹಿಳಾ ದಸರಾ 2026ರ ಭಾಗವಾಗಿ ಆಯೋಜಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 28ರ ಒಳೆಗೆ 9738710364 ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ 9738710364, 8495820268 ಅಥವಾ 9480113313 ಸಂಖ್ಯೆಗೆ ಕರೆ ಮಾಡುವಂತೆ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.