ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮದ ಅಂಗವಾಗಿ ಸಂಕಲ್ಪ ಶಿವಮೊಗ್ಗ ವತಿಯಿಂದ 25ಸಾವಿರ ಲಾಡು ಪ್ರಸಾದವನ್ನು ಭಕ್ತರಿಗೆ ವಿತರಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿಎಸ್ ಷಡಕ್ಷರಿ ನೇತೃತ್ವದಲ್ಲಿ ಗಣಪತಿ ದರ್ಶನ ಪಡೆದು ಮೆರವಣಿಗೆಯಲ್ಲಿ ಭಾಗವಹಿಸಿ ಸಾವಿರಾರು ಭಕ್ತರಿಗೆ ಪ್ರಸಾದ ಕುಡಿಯುವ ನೀರು ಹಾಗೂ ಮಜ್ಜಿಗೆ ವಿತರಿಸುವ ಮೂಲಕ ಭಕ್ತಾದಿಗಳಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಐತಿಹಾಸಿಕ ಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.