ಮಂಜುನಾಥ್ ಶೆಟ್ಟಿ…
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಆಯೋಜಿಸಲಾಗಿದ್ದ ಗಣೇಶ ರಾಜಬೀದಿ ಉತ್ಸವ ಹಾಗೂ ವಿಸರ್ಜನಾ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಭಾಗವಹಿಸಿ ಶ್ರೀ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದವರು ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಲ್ಲ ಭಕ್ತಿ, ಭಾವೈಕ್ಯತೆ, ಸೌಹಾರ್ದತೆ ಹಾಗೂ ಸಮಾಜದ ಒಗ್ಗಟ್ಟಿನ ಪ್ರತೀಕ ಎಂದರು.ಜನರೊಂದಿಗೆ ಬೆರೆತು ಉತ್ಸವದ ಸಂಭ್ರಮದಲ್ಲಿ ಪಾಲ್ಗೊಂಡು ಶ್ರದ್ಧಾಭಕ್ತಿಯಿಂದ ಗಣೇಶನಿಗೆ ವಿದಾಯ ಸಲ್ಲಿಸಿದರು.