ಮಂಜುನಾಥ್ ಶೆಟ್ಟಿ…

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SUDA) ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ (ಬಿನ್ ಸಿ. ಗಂಗಾಧರಪ್ಪ) ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) ಹಾಗೂ ಕಲಂ 3(4) ರಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯು ಈ ನಾಮನಿರ್ದೇಶನ ಮಾಡಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಸಿ.ಜಿ. ಮಧುಸೂದನ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅಕ್ಟೋಬರ್ 1, 2026 ರಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *