ಮಂಜುನಾಥ್ ಶೆಟ್ಟಿ…
ಬೆಂಗಳೂರಿನ ಅರಮನೆ ಮೈದಾನದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ, ಬಸವ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಬಸವ ಪುರಸ್ಕಾರ – 2026 ಪ್ರಶಸ್ತಿ ಪ್ರದಾನ ಸಮಾರಂಭವು ಪ. ಪೂ. ಮಹಾಜಗದ್ಗುರು ಡಾ. ಮಾತೆ ಗಂಗಾದೇವಿ ಅವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಸಂಘಟನೆ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯಾಧ್ಯಕ್ಷರಾದ ಶ್ರೀ ಸಿ. ಎಸ್. ಷಡಾಕ್ಷರಿಯವರಿಗೆ ಪ್ರತಿಷ್ಠಿತ “ಬಸವ ಪುರಸ್ಕಾರ – 2026” ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ನೌಕರರ ಹಿತಾಸಕ್ತಿ, ಸಂಘಟನಾ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಯ ಮೂಲಕ ಸಲ್ಲಿಸಿರುವ ಗಮನಾರ್ಹ ಕೊಡುಗೆಗೆ ಸಂದ ಈ ಗೌರವವು ಸೇವಾ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ.
ಈ ಗೌರವದ ಕ್ಷಣದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿ, ಶಾಸಕರಾದ ಶರವಣ, ಬಸವ ಪರಿಷತ್ ಅಧ್ಯಕ್ಷರಾದ ರೇಖಾ ಮಹಾಂತೇಶ, ಗೌರವಾಧ್ಯಕ್ಷರಾದ ಉಮಾದೇವಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.