ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಕಿರೀಟ ಪ್ರತಿಷ್ಠಿತ ‘ಶಿವಮೊಗ್ಗ ದಸರಾ ಮಹೋತ್ಸವ’ವನ್ನು ಈ ಬಾರಿ ಅತ್ಯಂತ ವೈವಿಧ್ಯಮಯವಾಗಿ ಹಾಗೂ ಜನಮನ ತಣಿಸುವ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದರು.

ಉತ್ಸವದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ದಸರಾ ವೇದಿಕೆಯ ನಿರ್ಮಾಣಕ್ಕೆ ಇಂದು ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, “ದಸರಾ ಸಾಂಸ್ಕೃತಿಕ ಸಂಭ್ರಮವನ್ನು ಸಾರ್ವಜನಿಕರು ಆರಾಮದಾಯಕವಾಗಿ ವೀಕ್ಷಿಸಲು ಅನುವಾಗುವಂತೆ ವೇದಿಕೆ, ವಿಶಾಲ ಆಸನ ವ್ಯವಸ್ಥೆ ಹಾಗೂ ಮೂಲಸೌಕರ್ಯಗಳನ್ನು ಅಚ್ಚುಕಟ್ಟಾಗಿ ಸಜ್ಜುಗೊಳಿಸಬೇಕು. ನಿಗದಿತ ಅವಧಿಯ ಮುನ್ನವೇ ಪೂರ್ಣಗೊಳಿಸಬೇಕು,” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಆದೇಶಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಶ್ರೀ ಪ್ರಭಾಕರ್ ಪಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *