ಮಂಜುನಾಥ್ ಶೆಟ್ಟಿ…

ಭದ್ರಾವತಿ ನಗರದ ಬಿ.ಎಚ್. ರಸ್ತೆಯ ಬಸ್ ನಿಲ್ದಾಣದ ಹತ್ತಿರವಿರುವ ಪದ್ಮ ನಿಲಯ ಹೋಟೆಲ್‌ಗೆ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಆಹಾರ ಸುರಕ್ಷತೆ ಹಾಗೂ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.ಈ ಸಮಯದಲ್ಲಿ ಹೋಟೆಲ್‌ನಲ್ಲಿ ಕೆಲವೊಂದು ಲೋಪಗಳು ಕಂಡುಬಂದಿದ್ದು ಅವುಗಳನ್ನು ಸರಿಪಡಿಸಿಕೊಳ್ಳಲು 1 ವಾರದ ಗಡುವು ನೀಡಿ ಎಚ್ಚರಿಕೆ ನೀಡಿದ್ದಾರೆ.

ಪರಿಶೀಲನೆ ವೇಳೆ ಕೊಳೆತ ಹಣ್ಣುಗಳು ಹಾಗೂ ಅವಧಿ ಮುಗಿದಿರುವ ಕೆಲವು ತಿಂಡಿ ತಿನಿಸು ಹಾಗೂ ಆಹಾರ ಪದಾರ್ಥಗಳು ಕಂಡು ಬಂದಿವೆ ಎಂದು ತಿಳಿದು ಬಂದಿದೆ. ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸುವುದು, ಹಣ್ಣುಗಳನ್ನು ಅಗತ್ಯವಿದ್ದಲ್ಲಿ ರೆಫ್ರಿಜರೇಟರ್‌ನಲ್ಲಿ ಇಡುವುದು ಸೇರಿದಂತೆ ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇದರ ಜೊತೆಗೆ ಹೋಟೆಲ್‌ನಲ್ಲಿ (FSSAI) ಪ್ರಮಾಣ ಪತ್ರ ಹಾಗೂ ಅಗತ್ಯ ಪರವಾನಿಗೆ ಪತ್ರಗಳನ್ನು ಗ್ರಾಹಕರಿಗೆ ಕಾಣುವಂತೆ ಪ್ರದರ್ಶಿಸದಿರುವುದು ಕೂಡ ಅಧಿಕಾರಿಗಳ ಗಮನಕ್ಕೆ ಬಂದಿದೆ. ಪರವಾನಗಿ ಪಡೆದಿದ್ದರೆ ಅದನ್ನು ಸೂಕ್ತ ರೀತಿಯಲ್ಲಿ ಪ್ರದರ್ಶಿಸಬೇಕು ಎಂದು ಸೂಚಿಸಲಾಗಿದೆ. ಪರವಾನಗಿ ಹೊಂದಿಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹೋಟೆಲ್ ಸಿಬ್ಬಂದಿ ಆಹಾರ ತಯಾರಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಹೈಜಿನ್ ಕ್ರಮಗಳಲ್ಲಿ ಲೋಪಗಳು ಕಂಡುಬಂದಿವೆ ಎಂದು ಎಸಿ ಡಾ. ಮೈತ್ರಿ ತಿಳಿಸಿದ್ದಾರೆ. ಸಿಬ್ಬಂದಿ ಕ್ಯಾಪ್, ಮಾಸ್ಕ್, ಗ್ಲೌಸ್ ಹಾಗೂ ಗೌನ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಬಳಸಬೇಕು. ಕೈ ತೊಳೆಯಲು ಸೂಕ್ತ ವ್ಯವಸ್ಥೆ ಇರಬೇಕು ಹಾಗೂ ಆಹಾರ ತಯಾರಿಕಾ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಲಾಗಿದೆ.

Leave a Reply

Your email address will not be published. Required fields are marked *