ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಅ.13 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವನ್ನು ಚಲನಚಿತ್ರ ನಟಿ ಶ್ರೀಮತಿ ಅಭಿನಯ ಮತ್ತು ಸರಿಗಮಪ ಖ್ಯಾತಿಯ ಕು|| ಸುರಕ್ಷ ದಾಸ್ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಮಹಿಳಾ ಸಂಘಗಳು ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಮಹಿಳಾ ದಸರಾ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಹಿಳಾ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.