ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿ ನಿರ್ಮಾಣಗೊಂಡಿರುವ ‘BSC ಟೆಕ್ಸ್‌ಟೈಲ್ಸ್’ ನೂತನ ಬೃಹತ್ ಮಳಿಗೆಯ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು, ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಅವರೊಂದಿಗೆ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಲಾಯಿತು.
ಈ ಸಮಾರಂಭದಲ್ಲಿ ಹಿರಿಯ ಮುಖಂಡರಾದ ಶ್ರೀ ಕೆ. ಎಸ್. ಈಶ್ವರಪ್ಪ, ಮಾಜಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿಯವರು, ಶ್ರೀ ಆರಗ ಜ್ಞಾನೇಂದ್ರ ಅವರು, ಶಾಸಕರಾದ ಶ್ರೀ ಚನ್ನಬಸಪ್ಪ, ಶ್ರೀ ಡಿ. ಎಸ್. ಅರುಣ್ ಹಾಗೂ ಹಲವಾರು ಜನಪ್ರತಿನಿಧಿಗಳು ಮತ್ತು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
88 ವರ್ಷಗಳ ಸುದೀರ್ಘ ಹಾಗೂ ವಿಶ್ವಾಸಾರ್ಹ ಪರಂಪರೆಯನ್ನು ಹೊಂದಿರುವ ಬಿ.ಎಸ್.ಸಿ. ಸಂಸ್ಥೆಯು ಇದೀಗ ಶಿವಮೊಗ್ಗದ ಜನತೆಗೆ ಅತ್ಯುತ್ತಮ ಉಡುಪುಗಳು ಮತ್ತು ಹೋಮ್ ಫರ್ನಿಷಿಂಗ್ ಉತ್ಪನ್ನಗಳ ಬೃಹತ್ ಸಂಗ್ರಹವನ್ನು ಒಂದೇ ಸೂರಿನಡಿ ತಲುಪಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ.
ಈ ನೂತನ ಮಳಿಗೆಯು ನಮ್ಮ ಶಿವಮೊಗ್ಗದ ವಾಣಿಜ್ಯ ಕ್ಷೇತ್ರಕ್ಕೆ ಮತ್ತಷ್ಟು ಮೆರುಗು ನೀಡಲಿದ್ದು, ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಹಾಗೂ ಜನತೆಗೆ ಗುಣಮಟ್ಟದ ಸೇವೆಯನ್ನು ನೀಡಲಿ ಎಂದು ಹಾರೈಸುತ್ತೇನೆ. ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಆಗಮಿಸಿದ ಎಲ್ಲಾ ಗ್ರಾಹಕ ಬಂಧುಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.