ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಿಳಾ ದಸರಾ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಚಲನಚಿತ್ರ ನಟಿ ಶ್ರೀಮತಿ ಅಭಿನಯ ಒಂದು ಸರಿಗಮಪ ಸುರಕ್ಷಾ ದಾಸ್ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿವಮೊಗ್ಗ ದಸರಾ ಎಂದರೆ ರಾಜ್ಯದಲ್ಲಿ ಪ್ರಸಿದ್ಧವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಮಹಿಳಾ ದಸರಾ ಕಾರ್ಯಕ್ರಮ ತುಂಬಾ ವಿಶೇಷವಾಗಿದೆ ಎಂದರು.ಈ ಕಾರ್ಯಕ್ರಮದಲ್ಲಿ ನಗರದ ವಿವಿಧ ಮಹಿಳಾ ಸಂಘಗಳು ಮತ್ತು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಾಗೂ ಮಹಿಳಾ ದಸರಾ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.