ಮಂಜುನಾಥ್ ಶೆಟ್ಟಿ…

ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಮೆಸ್ಕಾಂ ಉಪವಿಭಾಗ ಕಛೇರಿಗಳಲ್ಲಿ ದಿನಾಂಕ 15.10.2026, 16.10.2026 ಮತ್ತು 17.10.2026 ರಂದು ಮೂರು ದಿನಗಳ ಸೇವಾ ಸೇತು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ.

ಈ ಶಿಬಿರಗಳ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸುವುದು ಹಾಗೂ ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅಗತ್ಯವಿರುವ ನೋಂದಣಿ ಪ್ರಕ್ರಿಯೆ, ಬ್ಯಾಂಕ್ ಸಾಲ ಸೌಲಭ್ಯಗಳನ್ನು ಪಡೆಯುವ ಕುರಿತು ಮಾರ್ಗದರ್ಶನ ಮತ್ತು ಸೌರ ವಿದ್ಯುತ್ ಘಟಕಗಳ ಅಳವಡಿಕೆಗಾಗಿ ಅಧಿಕೃತ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಸಹಾಯ ಒದಗಿಸುವುದಾಗಿದೆ.
ಆಸಕ್ತ ಸಾರ್ವಜನಿಕರು ಮೇಲ್ಕಂಡ ದಿನಾಂಕಗಳಂದು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿರುವ ಮೆಸ್ಕಾಂ ಉಪವಿಭಾಗ ಕಛೇರಿಗಳಿಗೆ ತಮ್ಮ ವಿದ್ಯುತ್ ಬಿಲ್ಲಿನ ಪ್ರತಿ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಸಭೆಯ ಪ್ರಯೋಜನವನ್ನು ಪಡೆಯುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.