ಮಂಜುನಾಥ್ ಶೆಟ್ಟಿ…

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಪ್ತಾಹದ ಅಂಗವಾಗಿ, ಶಿರಾಳಕೊಪ್ಪ ಸಮೀಪದ ನೆರಲಗಿ ಗ್ರಾಮದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಈ ಶಿಬಿರವನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಶ್ರೀ ಬಿ. ಎಸ್. ಯಡಿಯೂರಪ್ಪನವರು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ತಾಲ್ಲೂಕಿನ ಜನಪ್ರಿಯ ಶಾಸಕರಾದ ಶ್ರೀ ಬಿ. ವೈ. ವಿಜಯೇಂದ್ರನವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಸೇವಾ ಸಪ್ತಾಹದಡಿ ಆಯೋಜಿಸಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಮಹತ್ವವನ್ನು ತಿಳಿಸಿದರು. ಶಿಬಿರಕ್ಕೆ ಸಹಕಾರ ನೀಡಿದ ಪ್ರಸಿದ್ಧ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ, ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಮಾರ್ಗದರ್ಶಕರಾದ ಶ್ರೀ ಕೆ. ಎಸ್. ಗುರುಮೂರ್ತಿ, ಮಂಡಲ ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಸಂಕ್ಲಾಪುರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗಪ್ಪ ನಿಂಬೇಗೊಂದಿ, ತಾಲ್ಲೂಕು ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಯೋಗೀಶಪ್ಪ ಹುಲ್ಲನಕೊಪ್ಪ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಮಾರವಳ್ಳಿ, ಶ್ರೀ ಬಂಗಾರಿನನಾಯ್ಕ್ , ಶ್ರೀ ನಿವೇದಿತ ರಾಜು, ಶ್ರೀ ವೀರೇಶ್
ಹೀರೇಜಂಬೂರು, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಶ್ರೀ ಆರ್. ಕೆ. ಶಂಬು, ಶಿರಾಳಕೊಪ್ಪ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಚನ್ನವೀರಶೆಟ್ಟಾರ್, ಸುಣ್ಣದಕೊಪ್ಪ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಮಳವಳ್ಳಿ, ತೊಗರ್ಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ದಿನೇಶ್ ಬಿಳಕಿ, ಶ್ರೀ ರವಿ ಶಾನುಭೋಗ್, ಶ್ರೀ ಮಂಚಾಲಿ ಚಂದ್ರಶೇಖರ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು. ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಸೇವೆ, ಆರೋಗ್ಯ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಸೇವಾ ಸಪ್ತಾಹದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

Leave a Reply

Your email address will not be published. Required fields are marked *