ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಲಗಾನ್ ಕಲ್ಯಾಣ ಮಂದಿರದಲ್ಲಿ ಶ್ರೀ ರಾಮ್ ಸೇವಾ ಸಂಕಲ್ಪ ವತಿಯಿಂದ ಆಯೋಜಿಸಲಾದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಹಾಗೂ ಅವರ ಉಜ್ವಲ ಭವಿಷ್ಯಕ್ಕೆ ಬೆಂಬಲವಾಗಿ ನಿಲ್ಲುವ ಇಂತಹ ಸಮಾಜಮುಖಿ ಕಾರ್ಯಗಳು ಶ್ಲಾಘನೀಯ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಶ್ರೀ ರಾಮ್ ಸೇವಾ ಸಂಕಲ್ಪದ ಕಾರ್ಯ ಅಭಿನಂದನೀಯವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ವಿಧಾನಸಭಾ ಸದಸ್ಯರಾದ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ ಧನಂಜಯ್ ಸರ್ಜಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ, ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಎಕ್ಸಿಕ್ಯೂಟಿವ್ ಡೈರೆಕ್ಟರಾದ ಶ್ರೀಧರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *