ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದಲ್ಲಿ ಆಯುಧ ಪೂಜೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ನಗರದ ವಿವಿಧ ಇಲಾಖೆಗಳು ಹಾಗೂ ಸಾರ್ವಜನಿಕರು ತಮ್ಮ ವಾಹನಗಳು, ಗೃಹೋಪಯೋಗಿ ವಸ್ತುಗಳು ಮತ್ತು ಕೆಲಸಕ್ಕೆ ಬಳಸುವ ಉಪಕರಣಗಳಿಗೆ ಪೂಜೆ ಸಲ್ಲಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.

ನಗರದ ಎಲ್ಲ ಪೊಲೀಸ್ ಇಲಾಖೆಗಳ ಕಚೇರಿಗಳು ಹಾಗೂ 9 ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. ಪೊಲೀಸ್ ಇಲಾಖೆಯ ಜೀಪು ಕಾರು ಸೇರಿದಂತೆ ವಿವಿಧ ವಾಹನಗಳನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಇದರೊಂದಿಗೆ ಪೊಲೀಸ್ ಠಾಣೆಗಳಲ್ಲಿ ಇಲಾಖೆಯ ವಾಹನಗಳ ಜತೆಗೆ ಬಂದೂಕುಗಳಿಗೂ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.

ತಾಯಿ ಚಾಮುಂಡೇಶ್ವರಿ ಹಾಗೂ ಸಾರ್ವಜನಿಕರ ಆಶೀರ್ವಾದದೊಂದಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಕರೆ ನೀಡಿದ ಅವರು ಏನೇ ಪರಿಸ್ಥಿತಿ ಎದುರಾದರೂ ತಾಯಿ ಕಾಪಾಡುತ್ತಾಳೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳನ್ನು ತಿಳಿಸಿದರು.

Leave a Reply

Your email address will not be published. Required fields are marked *