ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದನಾಡದೇವತೆ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಮತ್ತು ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿ ಮಹಿಳೆಯರ ಮಾನ ಪ್ರಾಣ ರಕ್ಷಣೆ ಮಾಡಬೇಕೆಂದು ಮನವಿ ಮಾಡಲಾಯಿತು. ದೇಶದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಿದ್ದು ರಾಜ್ಯದ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಬೆಟ್ಟದ ತಪ್ಪಲಿನ ಲಲಿತಾದ್ರಿ ಪುರದ ನಿರ್ಜನ ಪ್ರದೇಶದಲ್ಲಿ6 ಜನ ಮದ್ಯ ವ್ಯಸನಿಗಳ ಗುಂಪು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದು ರಾಜ್ಯದಲ್ಲಿ ಮಹಿಳೆಯರ ರಕ್ಷಣೆ ಕುರಿತು ಪ್ರಶ್ನೆ ಉಂಟಾಗಿದು ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಸ್ಥಿತಿ ಉಂಟಾಗಿದು ಈ ಕೂಡಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಕಾಮುಕರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಮತ್ತು ರಾಜ್ಯದ ಪ್ರವಾಸಿ ತಾಣಗಳಲ್ಲಿ ಗಿರಿಧಾಮಗಳಲ್ಲಿ ಬೆಟ್ಟ ಗುಡ್ಡದ ಮೇಲಿರುವ ದೇವಾಲಯಗಳ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹೆಚ್ಚಿಸಿ ಅಲ್ಲಿ ಮದ್ಯವ್ಯಸನಿಗಳು ಹಾಗೂ ಕಾಮುಕರ ಚಟುವಟಿಕೆ ಯನ್ನು ತಡೆಗಟ್ಟಿ ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಸಮಿತಿಯ ರಾಜ್ಯಾಧ್ಯಕ್ಷರಾದ ಕೆ ಶೇಖರ್ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಖಜಾಂಚಿ ಶಿವಮೊಗ್ಗ ವಿನೋದ್ ಉಪಾಧ್ಯಕ್ಷರಾದ ಚಂದನ್ ನಗರ ಘಟಕದ ಉಪಾಧ್ಯಕ್ಷರಾದ ವೆಂಕಟೇಶ್ ಸಮಿತಿಯ ಸದಸ್ಯರಾದ ಮಲ್ಲಪ್ಪ ಸಾಗರ್ ನವೀನ್ ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153