ಮಂಜುನಾಥ್ ಶೆಟ್ಟಿ…
ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ಸಂಚಾರ ವೃತ್ತದ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳಿಗೆ ನಂಬರ್ ಪ್ಲೇಟ್ಗಳನ್ನು ಅಳವಡಿಸದೆ ಸಂಚರಿಸುತ್ತಿದ್ದ ಮತ್ತು ನಿಯಮ ಬಾಹಿರವಾಗಿ ಫೋಲ್ಡಿಂಗ್ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಂಡಿರುವುದು ಹಾಗೂ ಕೆಲವು ಬೈಕ್ ವಾಹನಗಳಲ್ಲಿ ನಂಬರ್ ಪ್ಲೇಟ್ ತೆಗೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಅವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಒಟ್ಟು 72 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಂಬಂಧಪಟ್ಟ ವಾಹನಗಳ ಮಾಲೀಕರು ಹಾಗೂ ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯ (IMV Act) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ, ಎಲ್ಲಾ ದ್ವಿಚಕ್ರ ವಾಹನಗಳ ಮಾಲೀಕರು ಹಾಗೂ ಸವಾರರು ತಮ್ಮ ವಾಹನಗಳಿಗೆ ಕಾನೂನಿನ ಪ್ರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ನೋಂದಣಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ನಿಯಮಬಾಹಿರ ನಂಬರ್ ಪ್ಲೇಟ್ಗಳನ್ನು ಬಳಸಬಾರದು ಎಂದು ಅರಿವು ಮೂಡಿಸಿ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.