ಮಂಜುನಾಥ್ ಶೆಟ್ಟಿ…

ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಹೂವಿನ ಮಾರುಕಟ್ಟೆ ಸುತ್ತಮುತ್ತ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುವಂತೆ ಫುಟ್‌ಪಾತ್‌ ಹಾಗೂ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ಅನಧಿಕೃತ ಅಂಗಡಿಗಳು ಮತ್ತು ತಾತ್ಕಾಲಿಕ ವ್ಯವಸ್ಥೆಗಳನ್ನು ತೆರವುಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಕಾರ್ಯಾಚರಣೆ ನಡೆಸಲಾಗಿದೆ.

ನೋಟಿಸ್‌ ನೀಡಿದರೂ ಅನಧಿಕೃತವಾಗಿ ಅಂಗಡಿಗಳನ್ನು ಮುಂದುವರಿಸಿದರೆ, ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಫುಟ್‌ಪಾತ್‌ ಮುಕ್ತಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯ ವೇಳೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಟಾರ್ಪಲ್‌ಗಳು ಹಾಗೂ ಇತರ ತಾತ್ಕಾಲಿಕ ವ್ಯವಸ್ಥೆಗಳನ್ನು ತೆರವುಗೊಳಿಸಲಾಗಿದೆ. ಅಲ್ಲದೆ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ಹೂವಿನ ಮಾರುಕಟ್ಟೆಯ ಒಳಭಾಗದಲ್ಲಿ ವ್ಯಾಪಾರ ನಡೆಸಲು ಅವಕಾಶವಿದ್ದರೂ, ಹೊರಭಾಗದಲ್ಲಿ ಅನಧಿಕೃತವಾಗಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿರುವುದನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಫುಟ್‌ಪಾತ್‌ ಮೂಲಕ ಅಡೆತಡೆಯಿಲ್ಲದೆ ಸಂಚರಿಸಲು ಹಾಗೂ ವಾಹನ ಸಂಚಾರ ಸುಗಮವಾಗಿರಲು ಅನಧಿಕೃತ ವ್ಯಾಪಾರಕ್ಕೆ ಕಡಿವಾಣ ಹಾಕುವ ಕಾರ್ಯಾಚರಣೆಯನ್ನು ಮುಂದುವರಿಸಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *