ಮಂಜುನಾಥ್ ಶೆಟ್ಟಿ…

ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದ 100 ಅಡಿ ರಸ್ತೆಯಲ್ಲಿರುವ ಶಿವಾಲಯದ ಪಕ್ಕದಲ್ಲಿ, ಮಹಾನಗರ ಪಾಲಿಕೆಯ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಮಳಿಗೆಗಳನ್ನು ಹಂಚಿಕೆ ಮಾಡಲಾಗಿದ್ದರೂ, ಕೆಲವರು ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ನಡೆಸುತ್ತಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ಹಾಗೂ ವಾಹನ ಸವಾರರ ಓಡಾಟಕ್ಕೆ ತೊಂದರೆ ಆಗುತ್ತಿದ್ದ ಕಾರಣ ಅತಿಕ್ರಮಣ ಫುಟ್ ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು.

ಈ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದೊಂದಿಗೆ ಫುಟ್‌ಪಾತ್‌ಗಳ ಮೇಲಿನ ವ್ಯಾಪಾರ ಮಳಿಗೆಗಳು ಹಾಗೂ ಒತ್ತುವರಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ಹಂಚಿಕೆ ಮಾಡಿರುವ ಮಳಿಗೆಗಳಲ್ಲಿಯೇ ವ್ಯಾಪಾರ ನಡೆಸುವಂತೆ ಸೂಚನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ, ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ಪಾದಚಾರಿಗಳು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಜಾಹೀರಾತು ಫಲಕಗಳು ಹಾಗೂ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸಲಾಯಿತು.ಈ ಕಾರ್ಯಾಚರಣೆಯ ಮೂಲಕ ಸಾರ್ವಜನಿಕರು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.

Leave a Reply

Your email address will not be published. Required fields are marked *