ಮಂಜುನಾಥ್ ಶೆಟ್ಟಿ…

ಶಿವಮೊಗ್ಗ: ಬೀರೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಪುರುಷರ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ವಿವಿಧ ತೂಕದ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ರೆಹಮಾನ್ ಅವರು 80 ಕೆ.ಜಿ. ವಿಭಾಗದಲ್ಲಿ, ದ್ವಿತೀಯ ಬಿಬಿಎ ವಿದ್ಯಾರ್ಥಿ ಚಂದನ್ ಡಿ. ಅವರು 65 ಕೆ.ಜಿ. ವಿಭಾಗದಲ್ಲಿ ಹಾಗೂ ಪ್ರಥಮ ಬಿಬಿಎ ವಿದ್ಯಾರ್ಥಿ ನಾಗಚೈತನ್ಯ ಅವರು 60 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಎನ್ಇಎಸ್ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *