ಮಂಜುನಾಥ್ ಶೆಟ್ಟಿ…

ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿವಮೊಗ್ಗ ಘಟಕ ವತಿಯಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾದ ಕೆ ವಿ ವಸಂತ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರಧಾನಿ ನೀಡಿ ಗೌರವಿಸಲಾಯಿತು. ವಸಂತ್ ಕುಮಾರ್ ಅವರು ಪ್ರಸ್ತುತ ಶಿವಮೊಗ್ಗದ ಪ್ರಸಿದ್ಧ ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಮತ್ತು ನಾಗರಿಕ ವೇದಿಕೆ ಒಕ್ಕೂಟದ ಮೂಲಕ ಶಿವಮೊಗ್ಗ ಜನತೆಗೆ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಒಕ್ಕೂಟದ ವತಿಯಿಂದ ಪ್ರಶಸ್ತಿ ಪಡೆದ ಕೆ ವಿ ವಸಂತ್ ಕುಮಾರ್ ಅವರಿಗೆ ಸನ್ಮಾನಿಸಿ ಅಭಿನಂದನೆ ತಿಳಿಸಿದರು.

Leave a Reply

Your email address will not be published. Required fields are marked *