ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಸಂಚಾರಿ ಸಿಪಿಐ ದೇವರಾಜ್ ಅವರು ಪ್ರಥಮ ವರ್ಷದ ಕೃಷಿ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವ, ವಾಹನ ಚಾಲನೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಮಾದಕವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ‘ಬೇಡ ಬ್ರೋ’ ಅಭಿಯಾನದ ಮೂಲಕ ಮಾದಕವಸ್ತುಗಳಿಂದ ದೂರವಿದ್ದು, ಜವಾಬ್ದಾರಿಯುತವಾಗಿ ವಾಹನ ಚಲಾಯಿಸುವುದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.