ಮಂಜುನಾಥ್ ಶೆಟ್ಟಿ…
ಬಂಟರ ಯಾನೆ ನಾಡವರ ಸಂಘ (ರಿ) ಬೈಂದೂರುನಲ್ಲಿ ವಿದ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ ಅವರು ಬಂಟ ಸಮುದಾಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಸಾಧಕ ಸೇವಾ ವಂದನಾ ಸಮರ್ಪಣ ಪ್ರಧಾನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೋಕುಲ್ ಜಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣಿಭೂತರಾದರು.